ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ: ಹಲವು ರಸ್ತೆಗಳು ಜಲಾವೃತ
ಬೆಂಗಳೂರು: ರಾಜ್ಯದಲ್ಲಿ ವರುಣ ಅಬ್ಬರ ಮುಂದುವರೆದಿದ್ದು, ಇಂದು(ಶುಕ್ರವಾರ) ಸಂಜೆ ಆಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ. ನಗರದ ಕೋರಮಂಗಲ, ಶಾಂತಿನಗರ, ಕೆ.ಹೆಚ್ ರಸ್ತೆ, ವಿಧಾನಸೌಧ, ಕಬ್ಬನ್ಪಾರ್ಕ್, ಮೆಜೆಸ್ಟಿಕ್, ವಿಜಯನಗರ, ರಾಜಾಜಿನಗರ, ಬನಶಂಕರಿ ಹಾಗೂ ಜಯನಗರದ ಸುತ್ತಮುತ್ತ ಮಳೆ ಶುರುವಾಗಿದೆ. ಗಾಳಿ ಸಹಿತ ಮಳೆಯಿಂದ ವಾಹನ ಸವಾರರ ಪರದಾಟ ನಡೆಸಿದ್ದು, ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ.
ಸಂಚಾರ ವ್ಯತ್ಯಯ:ಸಂಜೆಯಾಗುತ್ತಿದ್ದಂತೆ ನಗರದಲ್ಲಿ ಸುರಿದ ಮಳೆಗೆ ರಸ್ತೆಯಲ್ಲಿಯೇ ಮಳೆ ನೀರು ಹೆಚ್ಚಾಗಿದೆ. ಈ ಹಿನ್ನಲೆ ವಾಹನಗಳು ನಿಧಾನವಾಗಿ ಸಂಚರಿಸುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಎಲೆಕ್ಟ್ರಾನಿಕ್ ಸಿಟಿ ಹಂತ-2 ವೀರಸಂದ್ರ ವೃತ್ತದಲ್ಲಿ ರಸ್ತೆಯಲ್ಲಿ ನೀರು ನಿಂತಿರುವುದರಿಂದ ನಿಧಾನಗತಿಯಲ್ಲಿ ವಾಹನ ಸಂಚಾರವಿದೆ. ಜೊತೆಗೆ ಕಸ್ತೂರಿನಗರ ಡೌನ್ ರ‍್ಯಾಂಪ್, ಕ್ವೀನ್ಸ್ ರಸ್ತೆಯಲ್ಲಿ ನೀರು ನಿಂತಿರುವುದರಿಂದ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಸಂಚರಿಸುವ ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ.