ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಶಿಗ್ಗಾವಿ : ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲಿ ಇಬ್ಬರು ಸಾವು

ಶಿಗ್ಗಾವಿ : ಪಟ್ಟಣದ ಹನುಮನರ ಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರು ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಎಂದು ತಿಳಿದುಬಂದಿದೆ.

ಮೃತ ದುರ್ದೈವಿಗಳು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು
ಬೆಳಿಗ್ಗೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದರು. ಜೊತೇಲಿ 7 ಜನರ ತಂಡವಿದ್ದು ಮುಂದೆ ಇದ್ದ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿರೋ ಶಂಕೆ ವ್ಯಕ್ತವಾಗಿದೆ.

ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kiniudupi@rediffmail.com

No Comments

Leave A Comment