ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೀಜಾಡಿ ಕ್ರಾಸ್ ಬಳಿ ಕಾರು ಪಲ್ಟಿ – ಚಾಲಕ ಪಾರು, ಕಾರು ಜಖಂ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಚಾಲಕ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಜಾಡಿ ಕ್ರಾಸ್ ಬಳಿ ಜು. 12 ರಂದು ಶುಕ್ರವಾರ ಸಂಜೆ ನಡೆದಿದೆ.

ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಬೀಜಾಡಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಹಾಕಿರುವ ಬ್ಯಾರೀಕೆಡ್ ನ್ನು ಕಂಡು ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಸರ್ವಿಸ್ ರಸ್ತೆಯಲ್ಲಿ ನಿಲ್ಲಿದ್ದ 407 ಟೆಂಪೋ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿ ಚಾಲಕ ಮಾತ್ರ ಇದ್ದಿದ್ದರಿಂದ ಅದೃಷ್ಟವಶಾತ್ ಯಾವುದೇ ಗಾಯ ನೋವುಗಳಿಲ್ಲದೇ ಸಂಭವನೀಯ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಹಿರಾತಿಗಾಗಿ ಸಾಲು ಸಾಲು ಬ್ಯಾರೀಕೆಡ್ ಅಳವಡಿಸುವುದರಿಂದ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

No Comments

Leave A Comment