ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ನಾಲ್ವರು ಯುವಕರು ಸಾವು
ಹಾವೇರಿ, ಜುಲೈ 13: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ಬಳಿ ಇಂದು ಬೆಳಗ್ಗೆ ನಡೆದಿದೆ. ನೀಲಪ್ಪ ಮೂಲಿಮನಿ(23), ಸುದೀಪ್ ಕೋಟಿ(18) ಸ್ಥಳದಲ್ಲೇ ಮೃತಪಟ್ಟಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶಿವನಗೌಡ ಯಲ್ಲನಗೌಡ್ರ(20), ಕಲ್ಮೇಶ ಮಾನೋಜಿ (26) ಮೃತರು. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ 7 ಯುವಕರ ತಂಡ ಸ್ವಿಫ್ಟ್ ಕಾರಿನಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಬೇರೆ ವಾಹನ ಓವರ್ಟೇಕ್ ಮಾಡಲು ಹೋಗಿ ಅಪಘಾತ ಶಂಕೆ ವ್ಯಕ್ತವಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಪಘಾತ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಶಿಗ್ಗಾಂವಿ ಪೊಲೀಸರಿಂದ ರಕ್ಷಣಾ ಕಾರ್ಯಚರಣೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಗಾಯಳನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೂಡ ಸಾವನ್ನಪ್ಪಿದ್ದಾರೆ.