ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬರ್ತ್ ಡೇ ಆಚರಣೆಗೆ ಹೊರಟ ಯುವಕರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು
ದೇವನಹಳ್ಳಿ: ವಾರಾಂತ್ಯ ಬರ್ತ್ ಡೇ ಪಾರ್ಟಿ ಮಾಡಲು ಹೊರಟಿದ್ದ ಇಬ್ಬರು ಯುವಕರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಬಲಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್ & ರನ್ಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್(17ವ), ಹರ್ಷ(18ವ) ಮೃತರು.
ಆಗಿದ್ದೇನು?: ಬರ್ತ್ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್ಡ್ರೈವ್ ಬಂದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಟೋಗೆ ಟ್ಯಾಂಕರ್ ಡಿಕ್ಕಿ, 8 ಜನ ಗಂಭೀರ ಗಾಯ: ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿದ್ದ 8 ಜನ ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ದುರಂತ ನಡೆದಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.