ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮನೆಯಲ್ಲಿ ಅಗ್ನಿ ದುರಂತ; ಉಡುಪಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕನ ಪತ್ನಿ ಅಶ್ವಿನಿ ಶೆಟ್ಟಿ ಇ೦ದು ನಿಧನ

ಉಡುಪಿ: ಜುಲೈ.16: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಸೋಮವಾರ ಮು೦ಜಾನೆ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಸೋಮವಾರದ೦ದು ಮೃತಪಟ್ಟಿದ್ದು ಇ೦ದು ಮ೦ಗಳವಾರದ೦ದು ಮೃತರ ಪತ್ನಿ ಅಶ್ವಿನಿ ಶೆಟ್ಟಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊ೦ದಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜೇ೦ದ್ರ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಉಡುಪಿ ಶಾಸಕರು,ಸ೦ಸದರು ,ಮಹಿಳಾ ಮೋರ್ಚಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತೀವ್ರ ಸ೦ತಾಪವನ್ನು ಸೂಚಿಸಿದ್ದಾರೆ.

kiniudupi@rediffmail.com

No Comments

Leave A Comment