ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಉಡುಪಿ: ಭಾರಿ ಮಳೆಗೆ ಒಂದು ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ; ಗ್ರಾಮಸ್ಥರು ಕಂಗಾಲು
ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದುಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ.
ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ದಿನನಿತ್ಯದ ಕೆಲಸಕ್ಕೆ ತೆರಳಲು ಗ್ರಾಮಸ್ಥರು ಇದೇ ಸೇತುವೆಯನ್ನ ಅವಲಂಭಿಸಿದ್ದರು. ಇದೀಗ ಕಳಪೆ ಕಾಮಗಾರಿಯಿಂದ ಸೇತುವೆ ಕುಸಿತ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.