ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ
ಬೆಂಗಳೂರು, ಜುಲೈ 17: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದ ನಂತರ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ.