ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಶಿರೂರು ಗುಡ್ಡ ಕುಸಿತ ಪ್ರಕರಣ:5 ವರ್ಷದ ಬಾಲಕಿಯ ಮೃತದೇಹ ಪತ್ತೆ
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ.
ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ.
ಸದ್ಯ ಈಗ ಐದು ಜನರ ಮೃತದೇಹ ಸಿಕ್ಕಿದೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.