ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಅಮೇರಿಕಾದ ಅಧ್ಯಕ್ಷ ಜೋ ಬೈಡೆನ್ ಗೆ ಕೋವಿಡ್
ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ.
ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್, ನಾನು
ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ಯುಎಸ್ ಅಧ್ಯಕ್ಷರಿಗೆ ಕೋವಿಡ್ ಇರುವುದನ್ನು ಘೋಷಿಸಿದ್ದಾರೆ.ಅಮೆರಿಕ ಅಧ್ಯಕ್ಷೀಯ ಚುನಾವಣೆ ಹೊತ್ತಿನಲ್ಲಿ ಅಮೆರಿಕ ಅಧ್ಯಕ್ಷರಿಗೆ ಕೋವಿಡ್ ದೃಢಪಟ್ಟಿದೆ.