ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಶಿರಾಡಿಘಾಟ್ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ – ಪ್ರಯಾಣಿಕರು ಪಾರು, ವಾಹನ ಸಂಚಾರ ಬಂದ್
ಹಾಸನ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.
ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸುತ್ತು. ನೋಡ ನೋಡುತ್ತಲೇ ಗುಡ್ಡದ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.