ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ – ಸ್ಥಳೀಯ ಯುವಕರ ಕಾರ್ಯಾಚರಣೆ ಯಿಂದ ತಪ್ಪಿದ ದೊಡ್ಡ ದುರಂ

ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಗುರುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಕೊಡಲೇ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ತಕ್ಷಣ ಅಲ್ಲಿದ್ದ ಇಸಾಕ್, ಇಕ್ಬಾಲ್ , ಜಾಯಿ, ಝಕಾರಿಯಾ, ಸಿದ್ದೀಕ್ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಬಸ್ಸಿನ ಹಿಂಬದಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

No Comments

Leave A Comment