ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ರೈಲ್ವೆ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, 3 ಯುವಕರು ಸ್ಥಳದಲ್ಲೇ ಸಾವು
ಕೊಪ್ಪಳ, ಜುಲೈ 19: ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ ನಗರದ ನಿವಾಸಿಗಳಾದ ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ್ ಭೀಮನಾಯ್ಕ (20) ಮೃತ ಯುವಕರು.
ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.