ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ 32 ಮಂದಿ ಬಲಿ
ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ ಇದುವರೆಗೆ 32 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ.
ಪ್ರತಿಭಟನಾಕಾರರು ಬಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸಂದರ್ಶನ ನಡೆದಿತ್ತು. ಈ ಸಂದರ್ಶನದಲ್ಲಿ ಅವರು, ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ್ಮ ಬೇಡಿಕೆಗೆ ಅಚಲರಾಗಿದ್ದಾರೆ. ಹಿಂಸಾಚಾರದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಬೇಕು. ಜೊತೆಗೆ ಪರಿಸ್ಥಿತಿ ನಿಯಂತ್ರಿಸಲು ಬಿಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದ್ದರು.
ಇದರಿಂದಾಗಿ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಯ ಪ್ರಧಾನ ಕಚೇರಿಗೆ ಬೆಂಕಿ ಹಚ್ಚಿದ್ದರು. ಹಾಗೂ ಪ್ರಧಾನ ಕಚೇರಿಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಕೂಡ ನಾಶಪಡಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಸ್ವಾತಂತ್ರ‍್ಯದ ಬಳಿಕ ಮೀಸಲಾತಿ ವ್ಯವಸ್ಥೆ ಜಾರಿಯಲ್ಲಿದೆ. ಇದರ ಅಡಿಯಲ್ಲಿ ಸ್ವಾತಂತ್ರ‍್ಯ ಹೋರಾಟಗಾರರ ಮಕ್ಕಳಿಗೆ ಶೇ.30, ದೇಶದ ಹಿಂದುಳಿದ ಜಿಲ್ಲೆಗಳ ಯುವಕರಿಗೆ ಶೇ.10, ಮಹಿಳೆಯರಿಗೆ ಶೇ.10, ಅಲ್ಪಸಂಖ್ಯಾತರಿಗೆ ಶೇ.5 ಮತ್ತು ಅಂಗವಿಕಲರಿಗೆ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಹೀಗಾಗಿ, ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ 56 ಪ್ರತಿಶತ ಮೀಸಲಾತಿ ಇದ್ದಿತ್ತು. 2018 ರಲ್ಲಿ, ಬಾಂಗ್ಲಾದೇಶದ ಯುವಕರು ಈ ಮೀಸಲಾತಿ ವ್ಯವಸ್ಥೆಯನ್ನು ವಿರೋಧಿಸಿದರು. ಹಲವಾರು ತಿಂಗಳುಗಳ ಪ್ರತಿಭಟನೆಯ ಬಳಿಕ, ಬಾಂಗ್ಲಾದೇಶ ಸರ್ಕಾರವು ಮೀಸಲಾತಿ ವ್ಯವಸ್ಥೆಯನ್ನು ತೆಗೆದುಹಾಕಿತು.
ಕಳೆದ ತಿಂಗಳು, ಜೂನ್ 5 ರಂದು, ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯವು ದೇಶದಲ್ಲಿ ಹಳೆಯ ಮೀಸಲಾತಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಆದೇಶ ಹೊರಡಿಸಿತ್ತು. ಶೇಖ್ ಹಸೀನಾ ಸರ್ಕಾರವೂ ಸುಪ್ರೀಂ ಕೋರ್ಟ್ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಎತ್ತಿಹಿಡಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದು, ಇದೀಗ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ.