ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಶ್ರೀಗಂಧ ಕಳ್ಳ ಸಾಗಣೆ: 2 ಕೋಟಿ ರೂ.ಮೌಲ್ಯದ ಮರ ವಶಕ್ಕೆ, ಆರೋಪಿಗಳ ಬಂಧನ
ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ ನಡೆಸಿದ್ದರು.
ದಾಳಿ ವೇಳೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2 ಕೋಟಿ ರೂಪಾಯಿ ಮೌಲ್ಯದ 50 ಕ್ಕೂ ಹೆಚ್ಚು ಶ್ರೀಗಂಧ ಮರದ ತುಂಡುಗಳನ್ನು ಪತ್ತೆ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.