ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಕೇರಳ ಮೂಲದ ದಂಪತಿ ಇಬ್ಬರು ಮಕ್ಕಳು ಕುವೈತ್‌ನ ಫ್ಲ್ಯಾಟ್‌ನಲ್ಲಿ ಎಸಿ ಅವಘಡದಿಂದ ಮೃತ್ಯು

ಕುವೈತ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏರ್ ಕಂಡೀಷನರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್‌ನ ಫ್ಲ್ಯಾಟ್‌ವೊಂದರಲ್ಲಿ ನಡೆದಿದೆ.

ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ್ ಮುಲಾಕಲ್, ಪತ್ನಿ ಲಿನಿ ಅಬ್ರಹಾಂ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೇಸಿಗೆ ರಜೆಗೆಂದು ಕೇರಳಕ್ಕೆ ತೆರಳಿದ್ದ ಕುಟುಂಬ ಶುಕ್ರವಾರ ಕುವೈತ್‌ಗೆ ವಾಪಸ್ ಆಗಿತ್ತು. ಅದೇ ದಿನ ರಾತ್ರಿ 8 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ.

ವರದಿಗಳ ಪ್ರಕಾರ, ಮ್ಯಾಥ್ಯೂಸ್ ಮುಲಾಕಲ್ ಅವರು ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಲಿನಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

No Comments

Leave A Comment