ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ: ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿವಾರ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟು (ಹೂಡೆ) ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.