ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​....ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

ಸರ್ಕಾರಿ ನೌಕರರು ಸಂಘ ಪರಿವಾರದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ: ಕೇಂದ್ರದ ನಿರ್ಧಾರ ಶ್ಲಾಘಿಸಿದ ಆರ್‌ಎಸ್‌ಎಸ್

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದು ಹಾಕಿದ್ದು, ಕೇಂದ್ರದ ಈ ಕ್ರಮವನ್ನು ಆರ್‌ಎಸ್‌ಎಸ್ ಸೋಮವಾರ ಶ್ಲಾಘಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಆರ್‌ಎಸ್‌ಎಸ್ ಹೇಳಿದೆ.

ಈ ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಮೇಲೆ ನಿಷೇಧ ಹೇರುವ ಮೂಲಕ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಹೆಚ್ಚಿಸಿಕೊಂಡಿವೆ ಎಂದು ಸಂಘ ಆರೋಪಿಸಿದೆ. ಈ ಹಿಂದೆಯೂ ಸರ್ಕಾರ, ತನ್ನ ನೌಕರರು ಆರ್‌ಎಸ್‌ಎಸ್‌ ಸಹವಾಸ ಮಾಡುವುದನ್ನು ನಿರ್ಬಂಧಿಸಿದ ಹಲವು ನಿದರ್ಶನಗಳಿವೆ.

ಸರ್ಕಾರ ನೌಕರರ ಮೇಲಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಆದೇಶ ಪ್ರಕಟಿಸಿದ ಒಂದು ದಿನದ ನಂತರ ಆರ್ ಎಸ್ಎಸ್ ಇದನ್ನು ಸ್ವಾಗತಿಸಿದೆ. ಆದರೆ ಹಲವು ವಿರೋಧ ಪಕ್ಷದ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ.

RSS ವಕ್ತಾರ ಸುನೀಲ್ ಅಂಬೇಕರ್ ಅವರು, “ಸರ್ಕಾರದ ಪ್ರಸ್ತುತ ನಿರ್ಧಾರವು ಸೂಕ್ತವಾಗಿದೆ ಮತ್ತು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ. “ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ನಿರ್ಮಾಣ ಮತ್ತು ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ” ಎಂದು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment