ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಪ್ರಜ್ವಲ್​ ರೇವಣ್ಣಗೆ ಬಿಗ್​ ಶಾಕ್, ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!

ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.​

ನಿನ್ನೆ (ಜುಲೈ 23) ಅಷ್ಟೇ ಸಹೋದರ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್​ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಕೋರ್ಟ್​, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ, ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಸೇರಿದಂತೆ ರೇವಣ್ಣ ಕುಟುಂಬಕ್ಕೆ ಶಾಕ್ ಆಗಿದ್ದು, ಇದೀಗ ಹೈಕೋರ್ಟ್​ ಮೆಟ್ಟಿಲೇರುವ ಅನಿವಾರ್ಯತೆ ಎದುರಾಗಿದೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್‌ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆ ಇಂದು 42ನೇ ಎಸಿಎಂಎಂ ಕೋರ್ಟ್‌ ಮುಂದೆ ಹಾಜರು ಪಡಿಸಲಾಗಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್‌ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಹೀಗಾಗಿ ಪ್ರಜ್ವಲ್‌ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು.

ಈಗಾಗಲೇ ಮೂರು ಕೇಸ್‌ಗಳನ್ನ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ 4ನೇ ಕೇಸ್‌ ದಾಖಲಾದಂತಾಗಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಲೈಂಗಿಕ ಕಿರುಕುಳದ ವಿಡಿಯೋವನ್ನ ಚಿತ್ರೀಕರಿಸಿದ್ದಾರೆ ಎಂದು ದೂರು ದಾಖಲಾಗಿದೆ. ಇದೇ ಪ್ರಕರಣದ ತನಿಖೆಗಾಗಿ ಬಾಡಿ ವಾರಂಟ್‌ ಅರ್ಜಿ ಸಲ್ಲಿಸಿದ ಎಸ್‌ಐಟಿ ಅಧಿಕಾರಿಗಳು, 4 ದಿನ ಕಸ್ಟಡಿಗೆ ಪಡೆದಿದ್ದರು. ಜೂನ್ 29ರವರೆಗೆ ಪ್ರಜ್ವಲ್‌ನನ್ನ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು.

No Comments

Leave A Comment