ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಪ್ಯಾರಿಸ್ ಒಲಿಂಪಿಕ್ಸ್ಗೆ ಕೊರೋನಾ ಭೀತಿ: ಇಬ್ಬರಿಗೆ ಸೋಂಕು ದೃಢ
Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ. ಆದರೀಗ ಈ ಕ್ರೀಡಾಕೂಟಕ್ಕೆ ಕೊರೋನಾ ಭೀತಿ ಎದುರಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಮಹಾ ಕ್ರೀಡಾಕೂಟಕ್ಕೆ ಕೊರೋನಾ ಭೀತಿ ಕೂಡ ಎದುರಾಗಿದೆ. ಏಕೆಂದರೆ ಆಸ್ಟ್ರೇಲಿಯಾ ತಂಡದ ಇಬ್ಬರು ಪೋಲೋ ಆಟಗಾರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಬೆನ್ನಲ್ಲೇ ಇಬ್ಬರನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ.
2020 ರಲ್ಲಿ ನಡೆಯಬೇಕಿದ್ದ ಟೋಕಿಯೋ ಒಲಿಂಪಿಕ್ಸ್ ಅನ್ನು ಕೊರೋನಾ ಕಾರಣದಿಂದಾಗಿ 2021 ರಲ್ಲಿ ಆಯೋಜಿಸಲಾಗಿತ್ತು. ಅಲ್ಲದೆ ಇಡೀ ಕ್ರೀಡಾಕೂಟವನ್ನು ಮುಂಜಾಗೃತ ಕ್ರಮಗಳೊಂದಿಗೆ ನಡೆಸಲಾಗಿತ್ತು. ಇದೀಗ ಪ್ಯಾರಿಸ್ ಒಲಿಂಪಿಕ್ಸ್ ಆರಂಭಕ್ಕೂ ಮುನ್ನ ಮತ್ತೆ ಕೊರೋನಾ ಭೀತಿ ಎದುರುಆಗಿದೆ.
ಆಸ್ಟ್ರೇಲಿಯಾ ಆಟಗಾರರಲ್ಲಿ ಕೋರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಎಲ್ಲರಿಗೂ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ ಎಂದು ಆಸ್ಟ್ರೇಲಿಯಾದ ಒಲಿಂಪಿಕ್ ತಂಡದ ಮೇಯರ್ಸ್ ಹೇಳಿದ್ದಾರೆ. ಅಲ್ಲದೆ ಅವರ ಜೊತೆಗಿರುವ ಇತರ ಕ್ರೀಡಾಪಟುಗಳನ್ನು ಸಹ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದ್ಯ ಮಾಹಿತಿ ಪ್ರಕಾರ, ಕೇವಲ ಇಬ್ಬರಲ್ಲಿ ಮಾತ್ರ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಅವರೊಂದಿಗಿದ್ದ ಇತರೆ ಆಸ್ಟ್ರೇಲಿಯನ್ ಕ್ರೀಡಾಪಟುಗಳ ರಿಪೋರ್ಟ್ ನೆಗೆಟಿವ್ ಬಂದಿದೆ. ಹೀಗಾಗಿ ಉಳಿದ ಆಸ್ಟ್ರೇಲಿಯಾ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯವಹಿಸುತ್ತಿರುವ ಫ್ರಾನ್ಸ್ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ ಎಂದು ಫ್ರೆಂಚ್ ಸರ್ಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಇದಾಗ್ಯೂ ಯಾವುದೇ ದೊಡ್ಡ ಅಪಾಯವಿಲ್ಲ ಎಂದು ಆರೋಗ್ಯ ಸಚಿವ ಫ್ರೆಡೆರಿಕ್ ವ್ಯಾಲೆಟೌಕ್ಸ್ ತಿಳಿಸಿದ್ದಾರೆ. ಅಲ್ಲದೆ ಪ್ಯಾರಿಸ್ ಒಲಿಂಪಿಕ್ಸ್ ನಿಗದಿಯಂತೆ ಜರುಗಲಿದೆ ಎಂದು ಭರವಸೆ ನೀಡಿದ್ದಾರೆ.