ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಂಗಳೂರಿನಲ್ಲಿ ಮಳೆ- ಗಾಳಿ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.

ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು.

ಈ ಹಿನ್ನಲೆಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಕುಸಿದಿದೆ. ಮಣ್ಣಿನಡಿ ಸಿಲುಕಿ ಶೈಲೇಶ್ ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ. ಪಾಂಡೇಶ್ವರ ಮತ್ತು ಕದ್ರಿ ಅಗ್ನಿ ಶಾಮಕ‌ದಳ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಅಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಲಾಗಿದೆ.

No Comments

Leave A Comment