ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕಾಸರಗೋಡು: ಸುಂಟರಗಾಳಿ, ಮಳೆಗೆ 25 ಕ್ಕೂ ಅಧಿಕ ಮನೆ, ವಾಹನಗಳಿಗೆ ಅಪಾರ ಹಾನಿ

ಕಾಸರಗೋಡು:ಜಿಲ್ಲೆಯಲ್ಲಿ ಬುಧವಾರ , ಗುರುವಾರ ಬೀಸಿದ ಸುಂಟರಗಾಳಿ ಹಾಗೂ ಮಳೆಗೆ ಅಪಾರ ಹಾನಿ ಉಂಟಾಗಿದ್ದು , ಹಲವು ಮರಗಳು , ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಾಹನ ಮನೆಗಳಿಗೆ ಹಾನಿ ಉಂಟಾಗಿದೆ.

ನಿಲುಗಡೆ ಗೊಳಿಸಿದ್ದ ವಾಹನಗಳ ಮೇಲೂ ಮರಗಳು ಉರುಳು ಬಿದ್ದಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹಲವಾರು ಕಂಬಗಳು ಮುರಿದು ಬಿದ್ದಿವೆ. 25 ಕ್ಕೂ ಅಧಿಕ ಮನೆಗಳಿಗೆ ಹಾನಿ ಉಂಟಾಗಿದೆ.

ಉದುಮ ಪಳ್ಳ ದಲ್ಲಿ ಗುರುವಾರ ಮಧ್ಯಾಹ್ನ ರೈಲ್ವೆ ಲೈನ್ ಮೇಲೆ ಮರಬಿದ್ದ ಘಟನೆ ನಡೆದಿದೆ.ರೈಲ್ವೆ ಅಧಿಕಾರಿಗಳು , ಅಗ್ನಿಶಾಮಕ ದಳದ ಸಿಬಂದಿಗಳು , ಬೇಕಲ ಠಾಣಾ ಪೊಲೀಸರು ಸ್ಥಳಕ್ಕೆ ತಲಪಿ ಮರವನ್ನು ತೆರೆವುಗೊಳಿಸಿದರು.ಕಾಸರಗೋಡು – ಕಾ ಞ೦ಗಾಡ್ ನಡುವಿನ ಹಳಿಯ ಉದುಮ ಪಳ್ಳ ಎಂಬಲ್ಲಿ ಘಟನೆ ನಡೆದಿದೆ. ಕಣ್ಣೂರು ಕಡೆಗೆ ಸರಕು ರೈಲು ಹಾದು ಹೋದ ಬಳಿಕ ಘಟನೆ ನಡೆದಿದ್ದು , ಹಲವು ವಿದ್ಯುತ್ ಕಂಬಗಳು ಮುರಿದುಬಿದ್ದಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದ ಬೃಹತ್ ಮರವೊಂದು ರಸ್ತೆಗೆ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ. ವಿದ್ಯುತ್ ಕಂಬಗಳು ನೆಲಕಚ್ಚಿದ್ದು , ಇದರುಂಡ ವಿದ್ಯುತ್ ಸಂಪರ್ಕ ಅಸ್ತವ್ಯಸ್ಥಗೊಂಡಿದೆ ಹೀಗಾಗಿ ಸಂಚಾರ ಸ್ಥಗಿತಗೊಂಡಿತ್ತು. ಗುರುವಾರ ಬೆಳಿಗ್ಗೆ ವೇಳೆಗೆ ಮುರಿದು ಬಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಗೊಳಿಸಲಾಯಿತು.

No Comments

Leave A Comment