ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಆರೆಂಜ್ ಅಲರ್ಟ್​

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕ್ಯಾಸಲ್​ರಾಕ್​, ಸಿದ್ದಾಪುರ, ಕಮ್ಮರಡಿ, ಕೊಟ್ಟಿಗೆಹಾರ, ಆಗುಂಬೆ, ಸೋಮವಾರಪೇಟೆ, ಭಾಗಮಂಡಲ, ಕಳಸ, ಕೊಲ್ಲೂರು, ಯಲ್ಲಾಪುರ, ಗೇರುಸೊಪ್ಪ, ಧರ್ಮಸ್ಥಳ, ಲೋಂಡಾ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಎನ್​ಆರ್​ಪುರ, ನಾಪೊಕ್ಲು, ಹುಂಚದಕಟ್ಟೆ, ಶೃಂಗೇರಿಯಲ್ಲಿ ಮಳೆಯಾಗಿದೆ.

ಕಾರ್ಕಳ, ಜಯಪುರ, ತರೀಕೆರೆ, ಕದ್ರಾ, ಪುತ್ತೂರು, ಕೋಟ, ಶಿರಾಲಿ, ಬೆಳ್ತಂಗಡಿ, ಅಜ್ಜಂಪುರ, ಅರಕಲಗೂಡು, ಪಣಂಬೂರು, ಮೂರ್ನಾಡು, ತ್ಯಾಗರ್ತಿ, ಹಾಸನ, ಹೊನ್ನಾವರ, ಅಂಕೋಲಾ, ಬನವಾಸಿ, ಔರಾದ್, ಸರಗೂರು, ಭದ್ರಾವತಿ, ಚನ್ನರಾಯಪಟ್ಟಣ, ಮುಂಡಗೋಡು, ಹಳಿಯಾಳ, ಕಾರವಾರ, ಮುಲ್ಕಿ, ಸಂಕೇಶ್ವರ, ಹಿಡಕಲ್, ಶ್ರವಣಬೆಳಗೊಳ, ಕುಮಟಾ, ಸುಳ್ಯ, ಧಾರವಾಡ, ಕಮಲಾಪುರ, ಕಲಘಟಗಿ, ಕಲಬುರಗಿ, ಮುದ್ದೇಬಿಹಾಳ, ಚಿಂಚೋಳಿ, ಕೃಷ್ಣರಾಜಪೇಟೆ, ಚನ್ನಗಿರಿ, ನಾಗಮಂಡಲ, ರಾಮನಗರದಲ್ಲಿ ಮಳೆಯಾಗಿದೆ.

ಹೊನ್ನಾವರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 24.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.5 ಡಿಗ್ರಿ ಸೆಲ್ಸಿಯಸ್​​​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 25.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

kiniudupi@rediffmail.com

No Comments

Leave A Comment