ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮುಡಾ-ವಾಲ್ಮೀಕಿ ಹಗರಣ: ಜು.29ಕ್ಕೆ ದೆಹಲಿಗೆ CM-DCM, ಕುತೂಹಲ ಮೂಡಿಸಿದ ನಾಯಕರ ಭೇಟಿ

ಬೆಂಗಳೂರು: ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮ ಹಗರಣಗಳ ಕುರಿತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಾಗ್ದಾಳಿ ನಡೆಸುತ್ತಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಜು.29ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡುತ್ತಿದ್ದು, ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ನಾಯಕರ ದೆಹಲಿ ಭೇಟಿ ಹಗರಣ ಅಥವಾ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯದಲ್ಲಿ ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಕೇಂದ್ರದ ನಾಯಕರೊಂದಿಗೆ ಚರ್ಚಿಸುವ ಸಲುವಾಗಿದೆ. ಈ ಭೇಟಿ ಪೂರ್ವ ಯೋಜಿತವಾದದ್ದು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಉಭಯ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ. ರಾಜ್ಯದಲ್ಲಿನ ಹಗರಣಗಳಿಂದ ಉಂಟಾಗಿರುವ ರಾಜಕೀಯ ಪರಿಸ್ಥಿತಿಯ ಬಗ್ಗೆಯೂ ತಿಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ಭೇಟಿ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ ಎಂದೂ ಮೂಲಗಳು ತಿಳಿಸುವೆ.

ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ಕೆಲ ಆಪ್ತರು, ಸಂಪುಟ ಸಹೋದ್ಯೋಗಿಗಳು ಕೂಡ ಸಾಥ್ ನೀಡಲಿದ್ದಾರೆಂದು ತಿಳಿದುಬಹಂದಿದೆ.

ದೇಶದ ಗಮನ ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಮತ್ತು ಡಿಸಿಎಂ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ಬಿಜೆಪಿ ಮತ್ತು ಜೆಡಿಎಸ್ ಈಗಾಗಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದು, ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಬೇಕೆಂದು ಒತ್ತಾಯಿಸಿದ್ದಾರೆ.

No Comments

Leave A Comment