ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿ ಒತ್ತಡಹೇರಿ ಉದ್ಘಾಟಿಸಿದ ಶಾಸಕ ಸುನಿಲ್ ಕುಮಾರ್ ರಾಜೀನಾಮೆಗೆ ಪ.ಹಿತರಕ್ಷಣಾ ಸಮಿತಿಯಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ಆಗ್ರಹ
ಕಾರ್ಕಳ: ಜು.27: ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶುಮಾಡಿ, RSS ಸಿದ್ಧಾಂತಕ್ಕೆ ವಿರೋಧವಾಗಿ ನಡೆದುಕೊಂಡಿರುವ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಕಳದ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ತುರಾತುರಿಯಲ್ಲಿ ಓಟಿಗಾಗಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ. ಬಳಿಕ ತನಿಖೆ ನಡೆಸಿ ಎಂದು ಮೊಸಳೆ ಕಣ್ಣೀರು ಸುರಿಸಿ, ಅಧಿಕಾರಿಗಳನ್ನು ಬಲಿಪಶು ಮಾಡುವ ಬದಲು ಪರಶುರಾಮ ಮೂರ್ತಿಯ ತನಿಖೆ ಮಾಡದಿದ್ದರೆ ರಾಜೀನಾಮೆ ನೀಡುವೆ ಅಂತ ಒಂದು ವಾಕ್ಯದ ಹೇಳಿಕೆಯನ್ನು ನೀಡಲಿ ಎಂದು ಆಗ್ರಹಿದ್ದಾರೆ.
ನಕಲಿ ಪರಶುರಾಮ ಮೂರ್ತಿಯನ್ನು ನಿಲ್ಲಿಸಿ ಅದನ್ನು ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಂದ ಉದ್ಘಾಟಿಸಿ ಇಡಿ ರಾಜ್ಯಕ್ಕೆ ಮುಜಗರ ತಂದಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಯವರು RSS ನ ಬೆಂಬಲದಲ್ಲಿ ಇಲ್ಲ ಎಂದು ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ರವರ ಹೇಳಿಕೆಯ ಬಲದಲ್ಲಿ ಇನ್ನು ಶಾಸಕ ಸ್ಥಾನದಲ್ಲಿ ಮುಂದುವರಿದಿದ್ದಾರೆ ಹಾಗೂ ಶಾಸಕರಾದ ಸುನಿಲ್ ಕುಮಾರ್ ಬೆಂಬಲಿಗರು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಸಾಮಾನ್ಯ ಜ್ಞಾನವನ್ನು ಉಪಯೋಗಿಸಿ ಕಾಮಗಾರಿಯನ್ನು ಪೂರ್ಣಗೊಳಿಸದೆ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಮಾಡಿ ಕರ್ನಾಟಕದ ಮುಖ್ಯಮಂತ್ರಿಯವರಿಂದ ಉದ್ಘಾಟಿಸಿದ್ದು ಯಾಕೆ ಎಂದು ಕಾರ್ಕಳದ ಶಾಸಕರನ್ನು ಕೇಳಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ವಿಧಾನ ಸಭಾ ಚುನಾವಣೆಗಾಗಿ ಕೇವಲ 2 ತಿಂಗಳಲ್ಲಿ ನಕಲಿ ಪರಶುರಾಮ ಮೂರ್ತಿಯ ನಿರ್ಮಾಣ ಮಾಡಿದ್ದು ಅಲ್ಲದೆ GST ವಂಚನೆ, ಅಕ್ರಮ ಹಣ ವರ್ಗಾವಣೆ, ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸರಕಾರದ ಷರತ್ತನ್ನು ಉಲ್ಲಂಘನೆ ಮಾಡಿ, ಹಣ ದುರ್ಬಳಕೆ, ಥೀಮ್ ಪಾರ್ಕ್ ಕಾಮಗಾರಿ ಸಂಪೂರ್ಣಗೊಳ್ಳುವ ಮೊದಲೇ ಉದ್ಘಾಟನೆ, ನ್ಯಾಯಾಲಯಗಳಲ್ಲಿ ದಾವೆ, ಶಿಲ್ಪಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು, ಅಧಿಕಾರಿಯ ಅಮಾನತ್ತು ಹೀಗೆ ಸಾಲು ಸಾಲು ವಿಚಾರಗಳು ಸಿಗುತ್ತದೆ. ಮುಂದೆ ನಕಲಿ ಪರಶುರಾಮ ಮೂರ್ತಿಯ ಹಗರಣ ನೇರವಾಗಿ ಶಾಸಕರಾದ ಸುನಿಲ್ ಕುಮಾರ್ ರವರ ಬುಡಕ್ಕೆ ಬರುವ ಎಲ್ಲ ಲಕ್ಷಣಗಳು ಇವೆ. ಆದ್ದರಿಂದ ಸತ್ಯವನ್ನು ಜಿಲ್ಲೆಯ ಜನರ ಮುಂದೆ ಹೇಳಿ, ಚುನಾವಣೆಗಾಗಿ RSS ಸಿದ್ಧಂತಕ್ಕೆ ವಿರೋಧವಾಗಿ ನಡೆದುಕೊಂಡಿರುವ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ಜಿಲ್ಲೆಯ ಜನರು ಪ್ರತಿಭಟಿಸುವ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೃಷ್ಣಮೂರ್ತಿ ಆಚಾರ್ಯ ಆಗ್ರಹಿಸಿದ್ದಾರೆ.