ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಪುತ್ತೂರು: ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಆರೋಪಿ ಪೊಲೀಸ್ ಕಸ್ಟಡಿಗೆ

ಪುತ್ತೂರು: ಯುವತಿ ಸ್ನಾನ ಮಾಡುತ್ತಿದ್ದ ವೇಳೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.

ಸ್ಥಳೀಯ ಉದ್ಯಮಿ, ಆರೋಪಿ ಅಬ್ದುಲ್ ರಹಿಮಾನ್ ಜುಲೈ 21 ರಂದು ರಾತ್ರಿ 9 ಗಂಟೆ ಸುಮಾರಿಗೆ ಸ್ನಾನ ಮಾಡುತ್ತಿದ್ದ 22 ವರ್ಷದ ಮಹಿಳೆಯನ್ನು ಇಣುಕಿ ನೋಡಿದ್ದಾನೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಳಿಕ ಪ್ರಕರಣದ ವಿಚಾರಣೆ ವೇಳೆ ಆರೋಪಿ ಅಬ್ದುಲ್ ರಹಿಮಾನ್ ಪಿರಿಯಡ್ಕ ಸುತ್ತಮುತ್ತಲಿನ ಮಹಿಳೆಯರಿಗೆ ಮನೆಯ ಹಿಂಬಾಗಿಲಿನ ಮೂಲಕ ಒಳ ನುಗ್ಗಿ ಅವರಿಗೆ ನಿದ್ದೆಯಲ್ಲಿದ್ದಾಗಲೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ.

No Comments

Leave A Comment