ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ದೆಹಲಿಯಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು: ಎಸ್‌ಯುವಿ ಚಾಲಕ ಸೇರಿ ಮತ್ತೆ ಐವರ ಬಂಧನ

ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಾವೃತವಾದ ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ರಾವ್ಸ್ ಸಿವಿಲ್ ಸರ್ವಿಸ್ ಕೋಚಿಂಗ್ ಇನ್‌ಸ್ಟಿಟ್ಯೂಟ್‌ ಗೇಟ್‌ಗೆ ಹಾನಿ ಮಾಡಿದ ಆರೋಪದ ಮೇಲೆ ಎಸ್ ಯುವಿ ಚಾಲಕ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.ಆರೋಪಿಗಳ ಗುರುತು ಮತ್ತು ಅವರ ಪಾತ್ರವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಬೇಕಾಗಿದೆ.ಕಳೆದ ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ ಮಧ್ಯ ದೆಹಲಿಯ ಯುಪಿಎಸ್ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಗೆ ನೀರು ನುಗ್ಗಿದ ಪರಿಣಾಮ 20 ವರ್ಷದ ಮೂವರು ಯುವ ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ್ದರು.

ಮೂವರು ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂನ ನವೀನ್ ಡಾಲ್ವಿನ್ ಎಂದು ಗುರುತಿಸಲಾಗಿದೆ.

ಕೋಚಿಂಗ್ ಇನ್ಸ್ಟಿಟ್ಯೂಟ್, ನೆಲಮಾಳಿಗೆಯ ಪ್ರದೇಶದಲ್ಲಿ ಗ್ರಂಥಾಲಯವನ್ನು “ಕಾನೂನುಬಾಹಿರವಾಗಿ” ನಡೆಸುತ್ತಿದೆ ಎಂದು ಪ್ರಾಥಮಿಕ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ನರಹತ್ಯೆ ಸೇರಿದಂತೆ BNS ನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣನ್ನು ದಾಖಲಿಸಲಾಗಿದೆ ಮತ್ತು ಆರೋಪಿ ಮಾಲೀಕರನ್ನು ಹಾಗೂ ಸಂಸ್ಥೆಯ ಸಂಯೋಜಕರನ್ನು ಭಾನುವಾರ ಬಂಧಿಸಲಾಗಿದೆ.

ಇಂದು ಎಸ್‌ಯುವಿ ಚಾಲಕ ಹಾಗೂ ನೆಲಮಾಳಿಗೆಯ ಮಾಲೀಕ ಸೇರಿದಂತೆ ಮತ್ತೆ ಐವರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗದೆ ಎಂದು ಡಿಸಿಪಿ (ಕೇಂದ್ರ) ಎಂ ಹರ್ಷವರ್ಧನ್ ಅವರು ತಿಳಿಸಿದ್ದಾರೆ.

No Comments

Leave A Comment