ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕಾಶ್ಮೀರ: ಸೋಪೋರ್‌ನಲ್ಲಿ ನಿಗೂಢ ಸ್ಫೋಟ, ನಾಲ್ವರು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಇಂದು ಮಧ್ಯಾಹ್ನ ಸೋಪೋರ್ ಪಟ್ಟಣದ ಶಾಯರ್ ಕಾಲೋನಿಯಲ್ಲಿ ಈ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. 4ನೇ ಗಾಯಾಳುವನ್ನು ಶ್ರೀನಗರದ ಸ್ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ದಾರಿ ಮಧ್ಯದಲ್ಲಿಯೇ ಸಾವನ್ನಪಿದರು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮೃತರನ್ನು ಸೋಪೋರ್ ಪ್ರದೇಶದ ನಿವಾಸಿಗಳಾದ ನಜೀರ್ ಅಹ್ಮದ್ ನದ್ರೂ, ಅಜಮ್ ಅಶ್ರಫ್ ಮಿರ್, ಆದಿಲ್ ರಶೀದ್ ಭಟ್ ಮತ್ತು ಅಬ್ದುಲ್ ರಶೀದ್ ಭಟ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಫೋಟದ ನಿಖರ ಸ್ವರೂಪವನ್ನು ಇನ್ನೂ ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.