ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಂಪ್ರದಾಯಕ್ಕೆ ಎಳ್ಳು-ನೀರು: ಕಾವೇರಿಗೆ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ

ಮಂಡ್ಯ, (ಜುಲೈ 29): ಕೆಲ ವರ್ಷಗಳಿಂದ ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು (ಜುಲೈ 29) ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಹೌದು…ಕೆಆರ್​ಎಸ್​​ನ​​ ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು-ನೀರು ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಣೆ ಮಾಡಿ ತೆರಳಿದ್ದು, ಇತ್ತ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳ ಬೆಂಬಲಿಗರು KRSನ ಖಾಸಗಿ ಹೋಟೆಲ್ ನಲ್ಲಿ ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಪ್ರದಾಯ ಮುರಿದಿದ್ದಾರೆ.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿವಸ ಬಾಡೂಟ ಆಯೋಜಿಸಿದ್ದ ಉದಾಹರಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಇನ್ನು ಇದಕ್ಕೆ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ಏನು ಹೇಳುತ್ತಾರೆ? ಈ ರೀತಿ ಬಾಡೂಟ ಆಯೋಜಿಸಿರುವ ಅಧಿಕಾರಿಗಳ ವಿರುದ್ಧ ಮುಖ್ಯಂಂತ್ರಿ ಸಿದ್ದರಾಮಯ್ಯ ಶಿಸ್ತು ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.​

kiniudupi@rediffmail.com

No Comments

Leave A Comment