ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಹಾಸನ: ಶಿರಾಡಿ ಘಾಟ್ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಹಲವು ವಾಹನಗಳು
ಹಾಸನ, ಜುಲೈ 30: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.
ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.
ವಾಹನ ಸಂಚಾರ ಸಂಪೂರ್ಣ ಬಂದ್
ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಜುಲೈ 18ರಂದು ಶಿರಾಡಿ ಘಾಟಿ ರಸ್ತೆಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿತ್ತು. ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಸಂಭವಿಸಿರಲಿಲ್ಲ. ನಂತರ ಒಂದು ದಿನದ ಮಟ್ಟಿಗೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅದಾದ ನಂತರ ಹಗಲು ಸಂಚಾರಕ್ಕೆ ಮಾತ್ರ (ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ) ಅನುಮತಿ ನೀಡಲಾಗಿತ್ತು.