ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಸಾಕ್ಸ್‌ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಮಾಡಿದ ಪಾಕ್ ಗಗನಸಖಿ ವಶಕ್ಕೆ
ಲಾಹೋರ್: ಜು.30ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ.
ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು, ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಮತ್ತು ಇಮಿಗ್ರೇಶನ್ ಆಥೋರಿಟಿಯು ಜಂಟಿ ಕಾರ್ಯಾಚರಣೆ ನಡೆಸಿ ಗಗನಸಖಿಯ ಕಾಲಿನಲ್ಲಿರುವ ಸಾಕ್ಸ್ ಅನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಆಕೆಯ ಕಾಲಿನ ಸಾಕ್ಸ್ ನಲ್ಲಿ ಹಲವು ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಆಕೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಗನಸಖಿಯ ಬ್ಯಾಗ್ ನಲ್ಲಿದ್ದ 37,318 ಡಾಲರ್ ಮತ್ತು 40,000 ಸೌದಿ ರಿಯಾಲ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗಗನಸಖಿ ಜೆಡ್ಡಾಗೆ ತೆರಳಲು ಪಿಐಎ ವಿಮಾನವನ್ನು ಹತ್ತಬೇಕಾಗಿತ್ತು. ಆಗ ಅಧಿಕಾರಿಗಳು ಆಕೆಯ ಮೇಲೆ ಅನುಮಾನಗೊಂಡು ಅವಳನ್ನು ಪರಿಶೀಲನೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಗಗನಸಖಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕಾಗಿ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ.