ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮನೆಯೂಟ ವಿಚಾರ: ಮ್ಯಾಜಿಸ್ಟ್ರೇಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್ ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಭೇದಿ, ಅತಿಸಾರ ಮತ್ತಿತ್ಯಾದಿ ಸಮಸ್ಯೆ ಉಂಟಾಗುತ್ತಿದೆ, ಜೊತೆಗೆ ದೇಹದ ತೂಕ ಇಳಿಕೆ ಆಗುತ್ತಿದೆ ಎಂದು ಅವರ ಪರ ವಕೀಲರು ಹೇಳಿದ್ದರು. ಹೀಗಾಗಿ ಮನೆಯೂಟ, ಹಾಸಿಗೆ, ಬಟ್ಟೆ, ಪುಸ್ತಕಗಳಿಗೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿತ್ತು.
ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ನಟ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಹೈಕೋರ್ಟ್ ಎದುರು ದರ್ಶನ್ ಅವರ ಪರ ವಕೀಲರು ಯಾವ ರೀತಿಯ ವಾದ ಮಂಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.