ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ವಯನಾಡಿನಲ್ಲಿ ಕಾಂಗ್ರೆಸ್ ನಿಂದ 100ಕ್ಕೂ ಹೆಚ್ಚು ಮನೆಗಳ ನಿರ್ಮಾಣ: ರಾಹುಲ್ ಗಾಂಧಿ

ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂ ಕುಸಿತ, ಇಲ್ಲಿಯವರೆಗೂ ರಾಜ್ಯ ನೋಡಿರದ ಒಂದು ಭೀಕರ ದುರಂತವಾಗಿದ್ದು, ಇದನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇತರ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಜಿಲ್ಲಾಡಳಿತ ಮತ್ತು ಪಂಚಾಯತ್‌ನ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಷಯವನ್ನು ಕೇಂದ್ರ ಸರ್ಕಾರ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಪ್ರಸ್ತಾಪಿಸಲಿದ್ದೇನೆ. ಇದು ವಿಭಿನ್ನ ಹಂತದ ದುರಂತವಾಗಿದ್ದು, ವಿಭಿನ್ನವಾಗಿ ಪರಿಗಣಿಸಬೇಕು ಎಂದರು.

ನಿನ್ನೆ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ಭೂಕುಸಿತದಿಂದ ಉಂಟಾದ ವಿನಾಶದ ಪ್ರಮಾಣವನ್ನು ನೋಡಿ “ರಾಷ್ಟ್ರೀಯ ವಿಪತ್ತು” ಎಂದು ಕರೆದರು. ಅಲ್ಲದೇ, ಇದನ್ನು ಎದುರಿಸಲು ತುರ್ತು ಸಮಗ್ರ ಕ್ರಿಯಾ ಯೋಜನೆಗೆ ಒತ್ತಾಯಿಸಿದರು.

No Comments

Leave A Comment