ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ

ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಕಳೆದ ವರ್ಷ 2023 ಆಗಸ್ಟ್​ 11 ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ 9 ಮಂದಿ ಗಾಯಗೊಂಡಿದ್ದರು.   ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇದೀಗ ಮತ್ತೊಂದು ಬೆಂಕಿ ಅನಾಹುತ ನಡೆದಿದೆ.

No Comments

Leave A Comment