Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ, ಕೈ​ ವಿರುದ್ಧ ಮೈತ್ರಿ ನಾಯಕರ ವಾಗ್ದಾಳಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್‌ ನದ್ದಾಗಿದೆ. ಕೆಂಗೇರಿಯ ನೈಸ್‌ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಆರಂಭಗೊಂಡಿದ್ದು ಅಲ್ಲೀಗ ಭಾರೀ ಸಂಚಾರದಟ್ಟಣೆ ಉಂಟಾಗಿದೆ. ಡಾ. ರಾಧಾ ಮೋಹನ್‌ ದಾಸ್ ಅಗರವಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಹಾಜರಿದ್ದರು.

No Comments

Leave A Comment