ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸಾವು
ಕೋಲಾರ: ಐಷಾರಾಮಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ.
ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿವೈಡರ್ಗೆ ಕಾರು ಡಿಕ್ಕಿ, ಓರ್ವ ಸಾವು: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ