Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

Paris Olympics 2024: ಕೂದಲೆಳೆಯ ಅಂತರದಲ್ಲಿ ಮನು ಭಾಕರ್​ಗೆ ಕೈ ತಪ್ಪಿದ 3ನೇ ಪದಕ

ಪ್ಯಾರಿಸ್ ಒಲಿಂಪಿಕ್ಸ್​ನ ಶೂಟಿಂಗ್​ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್ ಸುತ್ತಿನಲ್ಲಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದರೊಂದಿಗೆ ಮೂರನೇ ಪದಕ ಗೆಲ್ಲುವ ಅವರ ಕನಸು ನುಚ್ಚು ನೂರಾಯಿತು.

ಫೈನಲ್​ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಅಂದರೆ ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಕೈಚೆಲ್ಲಿಕೊಂಡರು.

ಮಹಿಳಾ 25 ಮೀಟರ್ ಪಿಸ್ತೂಲ್ ಫೈನಲ್ ಸ್ಪರ್ಧೆಯ ಫಲಿತಾಂಶ:

  1. ಜಿ ಯಾಂಗ್ (ಸೌತ್ ಕೊರಿಯ)- 37 ಅಂಕಗಳು

  2. ಕ್ಯಾಮಿಲ್ಲೆ ಜೆಡ್ರೆಜೆವ್ಸ್ಕಿ (ಫ್ರಾನ್ಸ್)- 37 ಅಂಕಗಳು

  3. ಮೇಜರ್ ವೆರೋನಿಕಾ (ಹಂಗೇರಿ)- 31 ಅಂಕಗಳು

  4. ಮನು ಭಾಕರ್ (ಭಾರತ)- 28 ಅಂಕಗಳು

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳು:

  • ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನು ಭಾಕರ್​ಗೆ ಕಂಚಿನ ಪದಕ.

  • 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಮನು ಭಾಕರ್​ಗೆ ಕಂಚಿನ ಪದಕ.

  • ಪುರುಷರ 50 ಮೀ ರೈಫಲ್ 3 ಪೊಸಿಷನ್ ಶೂಟಿಂಗ್ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚಿನ ಪದಕ.

ಮನು ಭಾಕರ್ ಅವರ ಸಾಧನೆಗಳು:

ಕ್ರೀಡಾಕೂಟ ಸಾಧನೆ
ಪ್ಯಾರಿಸ್ ಒಲಿಂಪಿಕ್ಸ್ 2024 10 ಮೀಟರ್ ಏರ್ ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚಿನ ಪದಕ10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ

ವಿಶ್ವ ಚಾಂಪಿಯನ್‌ಶಿಪ್ಸ್​ 2023 25 ಮೀಟರ್ ಪಿಸ್ತೂಲ್ ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ (2023)25 ಮೀಟರ್ ಪಿಸ್ತೂಲ್ ತಂಡದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ (2022)
ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ 2019 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ
ಕಾಮನ್‌ವೆಲ್ತ್ ಗೇಮ್ಸ್ 2018 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ
ಯೂತ್ ಒಲಿಂಪಿಕ್ ಗೇಮ್ಸ್ 2018 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ10 ಮೀ ಏರ್ ಪಿಸ್ತೂಲ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
No Comments

Leave A Comment