ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ, ಕರಾವಳಿಗೆ ಆರೆಂಜ್, ಮಲೆನಾಡಿಗೆ ಎಲ್ಲೋ ಅಲರ್ಟ್: ಹವಾಮಾನ ಇಲಾಖೆ
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
ಅಂತೆಯೇ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.
ಬೆಂಗಳೂರು
ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.