ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬೆಳಗ್ಗೆ ಮಗಳ ಲಗ್ನ ಪತ್ರಿಕೆ ಹಂಚಿ ರಾತ್ರಿ ಡ್ಯೂಟಿಗೆ ಹೋಗಿದ್ದ ಅಧಿಕಾರಿ ದುರಂತ ಸಾವು
ಬೆಂಗಳೂರು, ಆಗಸ್ಟ್.04: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Electronic City Flyover) ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಪಿ.ಮಂಜುನಾಥ್(52) ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತಡರಾತ್ರಿ ಕಾರು ಕೆಟ್ಟು ನಿಂತಿತ್ತು. ಟೋಯಿಂಗ್ ವೆಹಿಕಲ್ ಕರೆಸಿ ಫ್ಲೈಓವರ್ ಸಿಬ್ಬಂದಿ ತೆರವು ಮಾಡಿಸ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟಾಟಾ ಏಸ್ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ.
ಫ್ಲೈಓವರ್ ಟೋಲ್ ಸಿಬ್ಬಂದಿ ವಾಹನ & ಕಾರಿಗೆ ಟಾಟಾ ಏಸ್ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಮಂಜುನಾಥ್ ಹಾಘೂ ಮತ್ತೋರ್ವ ಸಹೋದ್ಯೋಗಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮಂಜುನಾಥ್ ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಳುಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆಗಸ್ಟ್ 10ರಂದು ಮೃತ ಮಂಜುನಾಥ್ ಮಗಳ ಮದುವೆ ಇತ್ತು. ಮಗಳ ಮದುವೆಗೆ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದ್ದ ಮಂಜುನಾಥ್, ನಿನ್ನೆ ಬೆಳಗ್ಗೆಯೂ ಮದುವೆಯ ಆಮಂತ್ರಣ ಪತ್ರಿಕೆ ಹಂಚಿ ಬಂದಿದ್ದರು. ನೈಟ್ ಶಿಫ್ಟ್ ಕೆಲಸಕ್ಕೆ ಹಾಜರಾಗಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಗಳ ಮದುವೆ ಸಂಭ್ರಮದಲ್ಲಿ ಇರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆ ತಾಳದೇ ಆತ್ಮಹತ್ಯೆ
ಡೆತ್ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಂಪಿಗೆಹಳ್ಳಿ ಕೆರೆ ಬಳಿ ಘಟನೆ ನಡೆದಿದೆ. ಸಾಲಬಾದೆಯಿಂದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವೆಸ್ಲೀ ಸುಂದರ್ ಸೂಸೈಡ್ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಗುಲದ ಹುಂಡಿ ಕಳ್ಳತನ
ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ದೇವಗಿರಿಯ ದುರ್ಗಮ್ಮ ದೇವಸ್ಥಾನದ ಹುಂಡಿ ಹಣ ಕಳ್ಳತನವಾಗಿದೆ. ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡು ದೇಗುಲಕ್ಕೆ ನುಗ್ಗಿ ಹುಂಡಿ ಹಣ ಕದ್ದೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಮಳಖೇಡ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.