ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಸಿಎಂ ಯೋಗಿ ನಿವಾಸದ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ಬೆಂಕಿ ಆರಿಸಿದ್ದಾರೆ.
ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್. ಅವರು ಕೌಟುಂಬಿಕ ಕಲಹದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಾಗ, ಮಹಿಳೆಯು ಇಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್‌ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.