ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
Vinesh Phogat: ವಿನೇಶ್ ಫೋಗಟ್ ಅನರ್ಹ; ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ
ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ವಿನೇಶ್ ಫೋಗಟ್ಗೆ ಬಿಗ್ ಶಾಕ್
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ವಿನೇಶ್ ಇಂದು ಮಧ್ಯಾಹ್ನ 12:45 ಕ್ಕೆ ಯುಎಸ್ಎ ಕುಸ್ತಿಪಟು ವಿರುದ್ಧ ಚಿನ್ನದ ಪದಕದ ಪಂದ್ಯವನ್ನು ಆಡಬೇಕಾಗಿತ್ತು. ಆದರೆ ನಿನ್ನೆ ನಡೆದ ತೂಕ ಪರೀಕ್ಷೆಯಲ್ಲಿ ವಿನೇಶ್ ಅವರ ತೂಕ ನಿಗದಿಗಿಂತ ಹೆಚ್ಚಿತ್ತು. ಹೀಗಾಗಿ ತಂಡವು ರಾತ್ರಿಯಿಡೀ ಅವರ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿತು. ಆದರೆ ಇಂದು ಬೆಳಿಗ್ಗೆ ನಡೆದ ತೂಕ ಪರೀಕ್ಷೆಯಲ್ಲಿ ಅವರ ತೂಕವು 50 ಕೆಜಿಗಿಂತ ಸ್ವಲ್ಪ ಹೆಚ್ಚಿತ್ತು. ಹೀಗಾಗಿ ಅವರನ್ನು ಅನರ್ಹಗೊಳಿಸಲಾಗಿದೆ. ಸದ್ಯಕ್ಕೆ ಭಾರತ ತಂಡದಿಂದ ಯಾವುದೇ ಪ್ರತಿಕ್ರಿಯೆ ನಿರೀಕ್ಷಿಸುವಂತಿಲ್ಲ. ಜೊತೆಗೆ ವಿನೇಶ್ ಅವರ ಗೌಪ್ಯತೆಯನ್ನು ಗೌರವಿಸಲು ನಾವೆಲ್ಲರೂ ನಿಮ್ಮನ್ನು ವಿನಂತಿಸುತ್ತೇವೆ. ಇದರಿಂದ ನಾವು ಮುಂಬರುವ ಈವೆಂಟ್‌ನತ್ತ ಗಮನ ಹರಿಸಬಹುದು ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವಿನೇಶ್ಗೆ ಯಾವುದೇ ಪದಕ ಸಿಗುವುದಿಲ್ಲ..!
ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ. ಆದರೆ ಚೊಚ್ಚಲ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಅವರಿಗೆ ಯಾವುದೇ ಪದಕ ಸಿಗುವುದಿಲ್ಲ.
ವಾಸ್ತವವಾಗಿ ಈ ಹಿಂದೆ 53 ಕೆಜಿ ವಿಭಾಗದಲ್ಲಿ ಭಾಗವಹಿಸುತ್ತಿದ್ದ ವಿನೇಶ್, 50 ಕೆಜಿ ವಿಭಾಗದಲ್ಲಿ ಅರ್ಹತೆ ಪಡೆಯಲು ಅಧಿಕ ತೂಕದ ಸಮಸ್ಯೆ ಎದುರಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಅವರು ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಇದೇ ರೀತಿಯ ಸಮಸ್ಯೆಯನ್ನು ಎದುರಿಸಬೇಕಾಯಿತು. ಆದರೆ ಅತ್ಯಂತ ಕಡಿಮೆ ಅಂತರದಿಂದ ಒಲಿಂಪಿಕ್ಸ್ ಅರ್ಹತಾ ಸುತ್ತಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.