ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ; ವಾಹನ ಸಂಚಾರ ಅಸ್ತವ್ಯಸ್ತ
ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಕಂಡುಬಂದಿದೆ.
ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.