ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಭಾರತಕ್ಕೆ ಮತ್ತೊಂದು ಆಘಾತ: ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್‌ನಿಂದ ಗಡಿಪಾರು
ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ ಪ್ಯಾರಿಸ್ ಒಲಿಂಪಿಕ್ ಅಸೋಸಿಯೇಷನ್ ಪ್ಯಾರಿಸ್‌ನಿಂದ ಗಡೀಪಾರು ಮಾಡಲು ನಿರ್ಧರಿಸಲಾಗಿದೆ.
ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಆಂಟಿಮ್ ಪಂಘಲ್ ಟರ್ಕಿಯ ಯೆಟ್ಗಿಲ್ ಝೆನೆಪ್ ವಿರುದ್ಧ 0-10 ಅಂತರದಲ್ಲಿ ಸೋತಿದ್ದರು. ಇನ್ನು ಅವರನ್ನು ಗಡಿಪಾರು ಮಾಡಲು ಕಾರಣವನ್ನು ಕೂಡ ಪ್ಯಾರಿಸ್ ಒಲಿಂಪಿಕ್ ಅಸೋಸಿಯೇಷನ್ ನೀಡಿದೆ. ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್ ಫಂಘಾಲ್ ಅವರ ಅಧಿಕೃತ ಕಾರ್ಡ್ ಅನ್ನು ಸಹೋದರಿ ನಿಶಾ ಬಳಸಿ ಸಿಕ್ಕಿಬಿದ್ದಿದ್ದಾರೆ. ಇದು ಒಲಿಂಪಿಕ್ ಆಟಗಾರರಿಗೆ ಮಾತ್ರ ನೀಡಲಾಗುವುದು, ಇದನ್ನು ಆಟಗಾರರಲ್ಲದವರು ಬಳಸುವಂತಿಲ್ಲ, ಆದರೆ ಅಂತಿಮ್ ಫಂಘಾಲ್ ಸಹೋದರಿ ಇದನ್ನು ಬಳಸಿರುವುದಕ್ಕೆ ಅವರು ಒಲಿಂಪಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆಟದಿಂದ ಹೊರ ಹಾಕಲಾಗಿದೆ.
ಅಂತಿಮ್ ಫಂಘಾಲ್ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಸೋತ ನಂತರ ತನ್ನ ತರಬೇತುದಾರ ಹಾಗೂ ಸಹೋದರಿಯೊಂದಿಗೆ ತಾವು ಉಳಿದಿದ್ದ ಹೋಟೆಲ್ಗೆ ಹೋಗಿದ್ದಾರೆ. ಆದರೆ ಅಂತಿಮ್ ಫಂಘಾಲ್ ಗೇಮ್ಸ್ ವಿಲೇಜ್‌ನಲ್ಲಿ ತಮ್ಮ ಬ್ಯಾಗ್ ಬಿಟ್ಟ ಕಾರಣ, ತನ್ನ ಸಹೋದರಿ ನಿಶಾ ಅವರಿಗೆ ತಮ್ಮ ಅಧಿಕೃತ ಕಾರ್ಡ್ ನೀಡಿ ಬ್ಯಾಗ್ ತರಲು ಹೇಳಿದ್ದಾರೆ. ಆದರೆ ಇದೀಗ ಇದು ಒಲಿಂಪಿಕ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಸಹೋದರಿಯನ್ನು ಗೇಮ್ಸ್ ವಿಲೇಜ್‌ಗೆ ಕಳುಹಿಸಿದರು ಕಾರಣ ಅಂತಿಮ್ ಫಂಘಾಲ್ ಅವರನ್ನು ಗಡಿಪಾರು ಮಾಡಲಾಗಿದೆ.
ಇನ್ನು ಈ ಬಗ್ಗೆ ಭಾರತೀಯ ಒಲಿಂಪಿಕ್ ಸಂಸ್ಥೆ ಮಾಹಿತಿ ನೀಡಿದ್ದು, ಶಿಸ್ತಿನ ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳ ಗಮನಕ್ಕೆ ತಂದ ಕಾರಣ ಅಂತಿಮ್ ಫಂಘಾಲ್ ಹಾಗೂ ಅವರ ಸಿಬ್ಬಂದಿಯನ್ನು ವಾಪಸ್ಸು ಭಾರತಕ್ಕೆ ಕಳುಹಿಸಲಾಗಿದೆ.
ಇದರ ಜತೆಗೆ ಅಂತಿಮ್ ಫಂಘಾಲ್ ಸಹಾಯ ಸಿಬ್ಬಂದಿ ವಿಕಾಸ್ ಮತ್ತು ಭಗತ್ ಮೇಲೆ ಪೊಲೀಸ್ ದೂರು ನೀಡಲಾಗಿದೆ. ಇವರಿಬ್ಬರು ಕುಡಿದು ಕ್ಯಾಬ್‌ನಲ್ಲಿ ಪ್ರಯಾಣಿಸಿದ್ದಾರೆ. ಹಾಗೂ ಕಾರು ಚಾಲಕನಿಗೆ ಹಣ ನೀಡುವಾಗ ಕಿರಿಕಿರಿ ಮಾಡಿದ್ದಾರೆ ಎಂದು ಪೊಲೀಸರಿಗೆ ಕ್ಯಾಬ್ ಡ್ರೈವರ್ ಪೊಲೀಸ್ ದೂರು ನೀಡಿದ್ದಾರೆ. ಆದರೆ ಅಂತಿಮ್ ಫಂಘಾಲ್ ಸಿಬ್ಬಂದಿಗಳು ಈ ಆರೋಪವನ್ನು ನಿರಕಾರಿಸಿದ್ದಾರೆ