ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್ ಫೋಗಟ್ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಕುಸ್ತಿಗೆ ವಿದಾಯ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.
ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ