ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಬಂಟ್ವಾಳ:ಆ, 8.ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ಬೆಂಜನಪದವು ಬಳಿ ನಡೆದಿದೆ.
ಇಲ್ಲಿನ ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎ೦ದು ಗುರುತಿಸಲಾಗಿದೆ.
ಬಡಕಬೈಲಿನ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಅನುಮಾನಿಸಿದ್ದಾರೆ. ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಾತ್ ರೂ ಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.