ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಲಾಲ್ ಬಾಗ್ ‘ ಸ್ವಾತಂತ್ರ್ಯೋತ್ಸವ ಫಲಪುಷ್ಪ’ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ನಂತರ ಮಾತನಾಡಿದ ಮುಖ್ಯಮಂತ್ರಿ, ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು.
ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.ಆಗಸ್ಟ್ 8 ರಿಂದ 19 ವರೆಗೆ ಈ ಪ್ರದರ್ಶನ ಇರಲಿದೆ.