ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ರಾಷ್ಟ್ರೀಯ ಸಹಕಾರಿ ನೀತಿ ಆಯೋಗದ ಅಧ್ಯಕ್ಷ ಸುರೇಶ್ ಪಿ ಪ್ರಭು ಭೇಟಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವದ 2ನೇ ದಿನವಾದ ಭಾನುವಾರದ೦ದು ಮಾಜಿ ಕೇಂದ್ರ ಸಚಿವರು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಸಹಕಾರಿ ನೀತಿ ಆಯೋಗ, ಹಾಗೂ ಅಖಿಲ ಭಾರತ್ ಜಿ ಎಸ್ ಬಿ ದೇವಸ್ಥಾನ ಒಕ್ಕೂಟ ಇದರ ಅಧ್ಯಕ್ಷರಾದ ಸುರೇಶ್ ಪಿ ಪ್ರಭು ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿದರು.ಈ ಸ೦ದರ್ಭದಲ್ಲಿ ದೇವಸ್ಥಾನದ ಆಡಳಿತ ಮ೦ಡಳಿಯ ಮೊಕ್ತೇಸರರಾದ ಪಿ ವಿ.ಶೆಣೈಯವರು ಇವರಿಗೆ ಶಾಲುಹೊದಿಸಿ ಶ್ರೀದೇವರ ಪ್ರಸಾದವನ್ನು ನೀಡಿ ಗೌರವಿಸಿದರು.

ಸ್ಥಳೀಯ ಶಾಸಕರಾದ ಯಶ್ಪಾಲ್ ಎ ಸುವರ್ಣ,ಶ್ರೀನಿವಾಸ ಪ್ರಭು ಉಡುಪಿ.ನಗರಸಭೆಯ ಮಾಜಿ ಸದಸ್ಯರಾದ ಶ್ಯಾಮ್ ಪ್ರಸಾದ್ ಕುಡ್ವ.ಮಟ್ಟಾರು ಸತೀಶ್ ಕಿಣಿ,ದೇವಸ್ಥಾನದ ಮ್ಯಾನೇಜರ್ ಸುರೇಶ್ ಭಟ್,ಕೆ.ಪ್ರಭಾಕರ್ ನಾಯಕ್ ,ಗಣೇಶ್ ಶೆಣೈ ಹಾಗೂ ಸಮಾಜದ ಗಣ್ಯರು ಹಾಜರಿದ್ದರು.

No Comments

Leave A Comment