ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾ 2024: ಜನರ ಉತ್ಸವ ಆಗಬೇಕು, ಈ ಬಾರಿ ಅದ್ದೂರಿಯಾಗಿ ಆಚರಣೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಕೊರೊನಾ – ಬರದ ಕಾರಣಕ್ಕೆ ಕಳೆದ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡಲಾಗಲಿಲ್ಲ, ಆದರೆ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸೋಣ ಎಂದು ಸೂಚನೆ ನೀಡಿದರು.

ದಸರಾ ಜನರ ಉತ್ಸವ ಆಗಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಸ್ತಬ್ಧಚಿತ್ರಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು ಎಂದರು.

ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನವಾಗಬೇಕು, ಈ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಸ್ತಬ್ಧಚಿತ್ರಗಳಲ್ಲಿ ಹೊಸತನ ಇರಲಿ. ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ ಎಂದರು. ಈ ಬಾರಿ 21 ದಿನ ದೀಪಾಲಂಕಾರ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು ಎಂದು ಸೂಚನೆ ನೀಡಿದರು

‘ಕರ್ನಾಟಕ ಸಂಭ್ರಮ -50’ ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು. ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸೂಚಿಸಿದರು. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.

kiniudupi@rediffmail.com

No Comments

Leave A Comment