ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಶೇಖ್ ಹಸೀನಾಳನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದಲ್ಲಿ ಭಾರತದ ಹೈಕಮಿಷನ್‌ಗೆ ಮುತ್ತಿಗೆ ಬೆದರಿಕೆ
ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.
ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತದ ವಿರುದ್ಧ ಬಿಎನ್‌ಪಿ ಸೇರಿದಂತೆ ಬಾಂಗ್ಲಾದೇಶದ ವಿರೋಧ ಪಕ್ಷಗಳು ಸಿಟ್ಟಿಗೆದ್ದಿವೆ. ಬಿಎನ್‌ಪಿ ಪ್ರಸ್ತುತ ಮಧ್ಯಂತರ ಸರ್ಕಾರದಲ್ಲಿ ಪ್ರಬಲ ಪ್ರಭಾವ ಹೊಂದಿದೆ.
ಕಳೆದ ಶುಕ್ರವಾರ ಢಾಕಾದಲ್ಲಿ ನಡೆದ ‘ಸಾಮರಸ್ಯ ರ‍್ಯಾಲಿ’ಯಲ್ಲಿ ಮಾತನಾಡಿದ ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್, ‘ಭಾರತದೊಂದಿಗೆ ಕೈದಿಗಳ ವಿನಿಮಯ ಒಪ್ಪಂದ ಮಾಡಿಕೊಂಡಿದ್ದೇವೆ. ಶೇಖ್ ಹಸೀನಾಳನ್ನು ಬೇರೆ ದೇಶಗಳಿಗೆ ಕಳುಹಿಸುವ ಬದಲು ಕೂಡಲೇ ಬಾಂಗ್ಲಾದೇಶಕ್ಕೆ ಕಳುಹಿಸಬೇಕು. ಇಲ್ಲವಾದಲ್ಲಿ ಭಾರತೀಯ ಹೈಕಮಿಷನರ್ ಅವರನ್ನು ಪೀಪಲ್ಸ್ ರೈಟ್ಸ್ ಕೌನ್ಸಿಲ್ ಸುತ್ತುವರೆದಿರುತ್ತದೆ ಎಂದು ಹೇಳಿದ್ದಾರೆ.