ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಮುಡಾ ಹಗರಣ: ಸಿದ್ದರಾಮಯ್ಯಗೆ ಶುರುವಾಯ್ತು ಮತ್ತೊಂದು ಸಂಕಷ್ಟ!
ಬೆಂಗಳೂರು, (ಆಗಸ್ಟ್ 12): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಭಾರೀ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಟಿಜೆ ಅಬ್ರಾಹಂ ಅವರು ಈ ಬಾರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ನೀಡಿದ್ದಾರೆ.
ಇದೇ ಮುಡಾ ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರ್ಕಾರ ಸಹ ನೋಟಿಸ್ ವಾಪಸ್ ಪಡೆದುಕೊಂಡು ಅಬ್ರಾಹಂ ಅವರ ದೂರು ತಿರಸ್ಕರಿಸಬೇಕೆಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದೆ. ಹೀಗಾಗಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ಅಥವಾ ಇಲ್ಲ ಎನ್ನುವ ಕುತೂಹಲ ಮೂಡಿಸಿದೆ.
ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದು, ನಾಳೆ (ಆಗಸ್ಟ್ 13) ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸಬೇಕೋ ಬೇಡ್ವಾ ಎನ್ನುವ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ. ಇದರ ಮಧ್ಯ ಇದೀಗ ಅಬ್ರಾಹಂ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿದ್ದರಾಮಯ್ಯ ಅವರು ಖಾಸಗಿ ದೂರು ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.